Breaking News

ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲ: ಸತೀಶ ಜಾರಕಿಹೊಳಿ

Spread the love

ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ ಜನ ಸೂಕ್ಷ್ಮತೆಯನ್ನು ಕಾಪಾಡಿಕೊಂಡರೇ ಯಮಕನಮರಡಿ ಕ್ಷೇತ್ರದಲ್ಲಿ ಆದಷ್ಟೂ ಬೇಗ ಕೊರೋನಾಗೆ ಮುಕ್ತಿ ನೀಡಬಹುದು ಎಂದರು.

ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲವಾಗಿಲಿದೆ. ಶಾಸಕರು, ಕ್ಷೇತ್ರಗಳಿಗೆ ಈ ಯೋಜನೆ ಕಲ್ಪಿಸಲು ಮುಂದಾಗಲಿ ಎಂದು ಮನವಿ ಮಾಡಿಕೊಂಡರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ