Breaking News

ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು

Spread the love

ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, ಓರ್ವ ಗಂಡು ಮಗ ಇದ್ದು, ಆರು ಜನ ಹೆಣ್ಣು ಮಕ್ಕಳ ಮದುವೆ ಮಾಡಿದ್ದಾರೆ. ಇನ್ನೋರ್ವ 16 ವರ್ಷದ ಪುತ್ರಿ, 17 ವರ್ಷದ ಮಗ ಇದ್ದಾರೆ. ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳು, ಬೇಸರದ ಜೀವನ ಸಾಗಿಸುತ್ತಿದ್ದಾರೆ.

ಮೊದಲು ರಾಮಪ್ಪ ಹೂಗಾರಗೆ ಸೊಂಕು ಕಾಣಿಸಿಕೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಆದರೆ ಪತಿಯ ಆರೈಕೆ ಮಾಡುತಿದ್ದ ಪತ್ನಿಗೂ ನಂತರ ಸೊಂಕು ತಗುಲಿ ವಾರದ ಬಳಿಕ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎಂಟು ಲಕ್ಷ ರೂ. ಖರ್ಚು ಮಾಡಿದರೂ ತಂದೆ, ತಾಯಿಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ ಎಂದು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ