Breaking News

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ.

ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದೆ. ಈ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಕರ ಸಂಟನೆಗಳು ಪ್ರತ್ಯೇಕವಾದ ಸಲಹೆ ಮತ್ತು ಸೂಚನೆಗಳನ್ನು ಸರ್ಕಾರಕ್ಕೆ ನೀಡಿವೆ. ಈ ಮಧ್ಯೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್​, ಪರೀೆ ವಿಚಾರವಾಗಿ ತಕ್ಷಣಕ್ಕೆ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ. ಪಾಲಕ, ಶಾಲಾ ಸಂಟನೆಗಳು ಮತ್ತು ಶಿಕ್ಷಣ ತಜ್ಞರ ಜತೆಗೆ ಸಭೆ ನಡೆಸಿ ಅಭಿಪ್ರಾಯವನ್ನು ಸಂಗ್ರಹಿಸಿ ಆನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಶಿಕ್ಷಕರು, ಶಿಕ್ಷಣ ತಜ್ಞರು, ಪಾಲಕರ ಜತೆಗೆ ಸಮಾಲೋಚಿಸಿದ ಬಳಿಕ ಪರೀೆ ಬಗ್ಗೆ ನಿರ್ಧಾರ ಪ್ರಕಟಿಸುತ್ತೇನೆ. ಮಕ್ಕಳ ಆರೋಗ್ಯದ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು.

| ಎಸ್​.ಸುರೇಶ್​ ಕುಮಾರ್​ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ

ಯಾರ ವಾದ ಏನು?

* ಪಾಲಕರು &ಕೇಂದ್ರದ ನಿರ್ಧಾರ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀೆ ರದ್ದು ಮಾಡುವುದೇ ಉತ್ತಮ. ಈವರೆಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಆಧರಿಸಿ ತೇರ್ಗಡೆ ಮಾಡುವುದು ಉತ್ತಮ ನಿರ್ಧಾರ. ಇಲ್ಲವಾದರೆ, ವಿದ್ಯಾರ್ಥಿಗಳಿಗೆ ಕರೊನಾ ಅಂಟಿಕೊಳ್ಳುವುದು ತಪ್ಪಿದ್ದಲ್ಲ.

* ಶಿಕ್ಷಣ ಸಂಸ್ಥೆ&ಏಕಾಏಕಿ ಪರೀೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನು ಪಾಸ್​ ಮಾಡುವುದರಿಂದ ಚೆನ್ನಾಗಿ ಓದಿದ ವಿದ್ಯಾರ್ಥಿಗೂ, ಓದದೇ ಇದ್ದ ವಿದ್ಯಾರ್ಥಿಗೂ ಒಂದೇ ರೀತಿ ಮೌಲ್ಯಮಾಪನ ಮಾಡಿದಂತಾಗುತ್ತದೆ. ಇದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ.

ಪರೀೆ ರದ್ದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಉತ್ತಮವಾಗಿದೆ. ರಾಜ್ಯ ಸರ್ಕಾರ ಕೂಡ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ ರದ್ದುಪಡಿಸುವ ನಿರ್ಧಾರ ತೆಗೆದುಕೊಳ್ಳಬೇಕು.

| ನಿರಂಜನಾರಾಧ್ಯ ಶಿಕ್ಷಣ ತಜ್ಞ

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ