Breaking News

ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತಿದ್ದೇವೆ -ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್

Spread the love

ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ಕೊನೆಗೂ ಕನ್ನಡಿಗರ ಆಗ್ರಹಕ್ಕೆ ಮಣಿದಿದ್ದು, ಸಮಸ್ತ ಕನ್ನಡಿಗರಲ್ಲಿ ಕ್ಷಮೆ ಯಾಚನೆ ಮಾಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಗೂಗಲ್​​.. ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್ನೆಟ್​​ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶ ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು, ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದ ಕ್ರಿಯಾಶೀಲವಾಗಿರುವುದನ್ನ ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ