Breaking News

ಮೈಸೂರಿನಲ್ಲಿ ತಾರಕಕ್ಕೇರಿದ IAS ವಾರ್​​: ಶಿಲ್ಪನಾಗ್​ಗೆ DC ನೋಟಿಸ್

Spread the love

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಿಂತ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾಧಿಕಾರಿ ನಡುವಿನ ಜಟಾಪಟಿಯೇ ಹೆಚ್ಚಾಗಿದ್ದು, ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಯಾವ ಜಿಲ್ಲೆಗೂ ಇಂತಹ ಜಿಲ್ಲಾಧಿಕಾರಿ ಸಿಗಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ರಾಜಿನಾಮೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಶಿಲ್ಪಾನಾಗ್‌ಗೆ ಸುಧೀರ್ಘ ಪತ್ರ ಬರೆದಿದ್ದು, ಕೋವಿಡ್ ನಿರ್ವಹಣೆ ಬಗ್ಗೆ ಹಾಗೂ ಇರುವ ಸಾಮಗ್ರಿ ಬಗ್ಗೆ ಮಾಹಿತಿ ಕೇಳಿದ್ದಾರೆ.

ಪಾಲಿಕೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗಿದೆ. ನಿಮಗೆ ನೀಡಿರುವ ಕೆಲಸ ಪೂರ್ಣಗೊಳಿಸದೆ ಆರೋಪ ಮಾಡಿದ್ದೀರಾ.ಜಿಲ್ಲಾಡಳಿತ ನಿಮಗೆ ಕೊಟ್ಟ ಜವಾಬ್ದಾರಿಯನ್ನು‌ ನೀವು ನಿರ್ವಹಿಸಿಲ್ಲ.ಸುಖಸುಮ್ಮನ್ನೆ ಆರೋಪ ಮಾಡೋದು ಸರಿಯಲ್ಲ ಎಂದು ಪತ್ರದಲ್ಲಿ ತಿಳಿಸಿದ್ದು, ಇದೇ ವೇಳೆ ನೀವೂ ಕಳೆದ ಎರಡು ದಿನದಿಂದ ಸರಿಯಾದ ಮಾಹಿತಿ ನೀಡಿಲ್ಲ. ಹಾಗಾಗಿ ಶೀಘ್ರವಾಗಿ ಸಂಪೂರ್ಣ ಮಾಹಿತಿ ನೀಡಿ ಎಂದು ಶಿಲ್ಪಾನಾಗ್ ಹೆಸರು ಉಲ್ಲೇಖಿಸಿ ನೋಟಿಸ್ ನೀಡಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ