Breaking News

ಜೂನ್​ ತಿಂಗಳಲ್ಲಿ ರಾಜ್ಯಕ್ಕೆ ಬರಲಿದೆ 58 ಲಕ್ಷ ಡೋಸ್​ ವ್ಯಾಕ್ಸಿನ್

Spread the love

ಬೆಂಗಳೂರು: ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಅಂತ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ವ್ಯಾಕ್ಸಿನ್ ಪೂರೈಕೆಯ ವಿಚಾರದ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಎಂದು ಕೇಂದ್ರ ಹೇಳಿದೆ. ಅದರಲ್ಲಿ 44 ಲಕ್ಷಕ್ಕೂ ಹೆಚ್ಚು ವ್ಯಾಕ್ಸಿನ್ ​ಉಚಿತವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ. ರಾಜ್ಯ ಸರ್ಕಾರ ಖರೀದಿ ಮಾಡಿರುವ 13 ರಿಂದ 14 ಲಕ್ಷ ಡೋಸ್ ವ್ಯಾಕ್ಸಿನ್​ ಜೂನ್​ ತಿಂಗಳಲ್ಲಿ ಬರುತ್ತಿದೆ. ಹೀಗಾಗಿ ಜೂನ್​ ತಿಂಗಳಲ್ಲೇ ಸುಮಾರು 58 ಲಕ್ಷ ಡೋಸ್ ವ್ಯಾಕ್ಸಿನ್​​ ರಾಜ್ಯಕ್ಕೆ ಸಿಗಲಿದೆ ಎಂದಿದ್ದಾರೆ.

ಗ್ಲೋಬಲ್ ಟೆಂಡರ್ ವಿಚಾರಕ್ಕೆ ಪ್ರತಿಕ್ರಿಯೇ ನೀಡಿದ ಡಾ.ಕೆ ಸುಧಾಕರ್, ಏಕರೂಪವಾಗಿ ಕೇಂದ್ರ ಸರ್ಕಾರ ವ್ಯಾಕ್ಸಿನ್​ ಖರೀದಿಗೆ ಮುಂದಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಅನೇಕ ಕಂಪನಿಗಳ ಜೊತೆ ನೇರವಾಗಿ ಮಾತುಕತೆ ನಡೆಸಿದೆ ಎಂದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ