Breaking News

ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು,ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ

Spread the love

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಯಡಿಯೂರಪ್ಪ ಸಂಘದ ಹಿರಿಯ ಪ್ರಚಾರದ ಹರಿಭಾವು ವಝೆ ಅವರ ಆರೋಗ್ಯ ವಿಚಾರಿಸಿದರು

ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು. ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು

ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್ ಬಾಕಿಯನ್ನು ಶೀಘ್ರ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದೂ ಯಡಿಯೂರಪ್ಪ ತಿಳಿಸಿದರು.

ಬೆಳಗಾವಿಯಲ್ಲಿ ಯಡಿಯೂರಪ್ಪ ಸಂಘದ ಹಿರಿಯ ಪ್ರಚಾರದ ಹರಿಭಾವು ವಝೆ ಅವರ ಆರೋಗ್ಯ ವಿಚಾರಿಸಿದರು. ಹಿರಿಯ ಸಚಿವರು ಇದ್ದಾರೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅವರು ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.

ಸಚಿವರಾದ ಬಸವರಾಜ ಬೊಮ್ಮಾಯಿ, ಸುಧಾಕರ, ಗೋವಿಂದ ಕಾರಜೋಳ ಮೊದಲಾದವರು ಯಡಿಯೂರಪ್ಪ ಜೊತೆಗೆ ಆಗಮಿಸಿದ್ದಾರೆ.

 


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ