ನೆಲಮಂಗಲ: ಮಳೆ ಕಾರಣದಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಾರ್ ಇದ್ದ ಹೆಲಿಕಾಪ್ಟರ್ ಅನ್ನು ನೆಲಮಂಗಲದಲ್ಲಿ ಲ್ಯಾಂಡ್ ಮಾಡಲಾಗಿದೆ.

ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.ಕೆ ಶಿವಕುಮಾರ್ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ದಾವಣೆಗೆರೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಿದ್ದರು. ಹೀಗೆ ಕಾರ್ಯಕ್ರಮ ಮುಗಿಸಿ ದಾವಣಗೆರೆಯಿಂದ ಬೆಂಗಳೂರಿಗೆ ವಾಪಾಸ್ ಆಗುವ ಸಂದರ್ಭದಲ್ಲಿ ಮಳೆ ಆರಂಭವಾಗಿದೆ.

ಮಳೆ ಕಾರಣಕ್ಕೆ ಲ್ಯಾಂಡಿಂಗ್ ಗೆ ಹೆಚ್ ಎಎಲ್ ನಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ನೆಲಮಂಗಲದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದೆ.
Laxmi News 24×7