ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ನಾನು ಯಾವುದೇ ಗೊಂದಲದಲ್ಲಿ ಇಲ್ಲ. ನನಗೆ ಹೈಕಮಾಂಡ್ ಅಧಿಕಾರ ನಡೆಸಲು ಅವಕಾಶಕೊಟ್ಟಿದೆ. ಆ ನಿಟ್ಟಿನಲ್ಲಿ ಶಕ್ತಿ ಮೀರಿ ರಾಜ್ಯದ ಅಭಿವೃದ್ಧಿ, ಜನರ ಏಳಿಗಾಗಿ ನಾನು ಕೆಲಸ ಮಾಡುತ್ತೇನೆ. ಯಾವಾಗ ಹೈಕಮಾಂಡ್ ರಾಜೀನಾಮೆಗೆ ಸೂಚಿಸುತ್ತೋ ತಕ್ಷಣ ರಾಜೀನಾಮೆ ನೀಡುತ್ತೇನೆ. ಇನ್ನು ಪರ್ಯಾಯ ನಾಯಕರು ಇಲ್ಲ ಎಂಬ ಮಾತನ್ನು ನಾನು ಒಪ್ಪಲ್ಲ ಎಂದು ಹೇಳಿದರು.
Laxmi News 24×7