Breaking News

ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ವಿಜಯೇಂದ್ರ ದೆಹಲಿಗೆ ಹೋಗಿದ್ದು ಇ.ಡಿ. ವಿಚಾರಣೆಗೆ; ಯತ್ನಾಳ

Spread the love

ವಿಜಯಪುರ: ಬಿ.ವೈ. ವಿಜಯೇಂದ್ರ ದೆಹಲಿಗೆ ಹೋಗಿದ್ದು ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆ ಎದುರಿಸಲೇ ಹೊರತು, ಪಕ್ಷದ ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಲು ಹೋಗಿದ್ದರು ಎಂಬುದು ಸುಳ್ಳು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ಎನ್ನುವ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಜಯೇಂದ್ರ ಅವರನ್ನು ವಿಚಾರಣೆ ನಡೆಸಿದೆ ಎಂದರು.

ಕೋವಿಡ್ ವಿಚಾರ ಹಾಗೂ ಪಕ್ಷದ ಆಂತರಿಕ ವಿಚಾರವನ್ನು ರಾಜ್ಯ ಉಪಾಧ್ಯಕ್ಷರ ಜತೆ ರಾಷ್ಟ್ರೀಯ ನಾಯಕರು ಮಾತನಾಡುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು, ಮುಖ್ಯಮಂತ್ರಿ ಇದ್ದಾರೆ. ಅವರ ಜತೆ ಮಾತನಾಡುತ್ತಾರೆಯೇ ಹೊರತು ಉಪಾಧ್ಯಕ್ಷರ ಜೊತೆ ಮಾತನಾಡುವುದಿಲ್ಲ. ರಾಜ್ಯದಲ್ಲಿ ಒಂಬತ್ತು ಜನ ಉಪಾಧ್ಯಕ್ಷರು ಇದ್ದಾರೆ. ಹಾಗಾದರೆ, ಅವರನ್ನು ಬಿಟ್ಟು ವಿಜಯೇಂದ್ರ ಜತೆ ಮಾತನಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ