Breaking News

ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ : ಬಿ ಸಿ ಪಾಟೀಲ್

Spread the love

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.

ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದಕ್ಕೂ ಮುನ್ನ ಈ ವಿಷಯ ಪ್ರಸ್ತಾಪಿಸಿದ ಶಾಸಕ ಪಿ.ರಾಜೀವ್ ಅವರು ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ