Breaking News
Home / ಜಿಲ್ಲೆ / ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ:ಡಿ.ಕೆ.ಶಿವಕುಮಾರ್

ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ:ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು: ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಿಸಿ 129 ವರ್ಷವಾಗಿದೆ. ಜನ್ಮದಿನ ಆಚರಿಸಲು ಇಡೀ ದೇಶ ಬಹಳ ಉತ್ಸುಕವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದ ಪ್ರಸ್ತಾವನೆಯನ್ನು ನೀವುಗಳು ಇರುವ ಸ್ಥಳದಿಂದಲೇ ಅಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಪಿಠೀಕೆ ಓದುವ ಮೂಲಕ ನಮ್ಮ ಐಕ್ಯತೆ, ಸಮಗ್ರತೆ, ಬ್ರಾತೃತ್ವವನ್ನು ಎತ್ತಿ ಹಿಡಿದು ಈ ದಿನವನ್ನು ವಿಶೇಷವಾಗಿ ಆಚರಿಸಬೇಕು ಎಂದು ರಾಜ್ಯ ಹಾಗೂ ರಾಷ್ಟ್ರದ ಎಲ್ಲ ಜನರಿಗೂ ಮನವಿ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಇದು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಪಕ್ಷದವರನ್ನು ಇದನ್ನು ಪಾಲಿಸಬಹುದು. ಇದನ್ನು ನಾವು ಸಂಭ್ರಮದಿಂದ ಮಾಡುವ ಅಗತ್ಯವಿಲ್ಲ. ಸರಳವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ. ಯಾರ ಜತೆಗೂ ಸ್ಪರ್ಧೆ ನಡೆಸಲು ಈ ಕಾರ್ಯಕ್ರಮ ಮಾಡುತ್ತಿಲ್ಲ. ಸ್ಪರ್ಧೆ ಮಾಡುವ ಅಗತ್ಯವೂ ನಮಗಿಲ್ಲ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಪ್ರತಿಯೊಂದು ಅಕ್ಷರದ ಸಂದೇಶದಿಂದ ನಾವು ಈ ದೇಶವನ್ನು ಕಟ್ಟುತ್ತಿದ್ದೇವೆ. ಸಂವಿಧಾನವೇ ನಮ್ಮ ದೇಶಕ್ಕೆ ದೊಡ್ಡ ಆಸ್ತಿ. ಹೀಗಾಗಿ ಅಂಬೇಡ್ಕರ್ ಜನ್ಮದಿನದ ಸುಸಂದರ್ಭದಲ್ಲಿ ನಮ್ಮ ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವವನ್ನು ತಿಳಿಸಲು ಈ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಇದನ್ನು ಯಾರು ಯಾವ ರೀತಿ ಬೇಕಾದರೂ ಅರ್ಥೈಸಿಕೊಳ್ಳಬಹುದು. ಅದಕ್ಕೆ ನಮ್ಮ ಅಭ್ಯಂಥರವಿಲ್ಲ. ಅಂಬೇಡ್ಕರ್ ಜಯಂತಿ ಮಾಡಬೇಕು ಅಂತಾ ಎಲ್ಲರಿಗೂ ಆಸೆ ಇದೆ. ಈ ಎಲ್ಲ ಕಷ್ಟಗಳು ಕಳೆಯಲಿ ನಂತರ ಒಂದು ದಿನ ತೀರ್ಮಾನಿಸಿ ಅಂಬೇಡ್ಕರ್ ಜಯಂತಿ ಆಚರಿಸೋಣ ಎಂದು ಕರೆ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ