Breaking News
Home / ಜಿಲ್ಲೆ / ಬೆಳಗಾವಿ / ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆಯ ಸಾಧ್ಯತೆ : ಬಿ.ಸಿ.ಪಾಟೀಲ

ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆಯ ಸಾಧ್ಯತೆ : ಬಿ.ಸಿ.ಪಾಟೀಲ

Spread the love

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದರು.

ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಳ್ಳಬೇಕು ಎಂದು ಕುಡಚಿ ಶಾಸಕ ಪಿ‌.ರಾಜೀವ್ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಕೃಷಿ ಸಚಿವರು, ಈ ರೀತಿ ಕೃಷಿ ಜಿಲ್ಲೆ‌ ಘೋಷಿಸುವ ಬಗ್ಗೆ ಗೊತ್ತಿಲ್ಲ. ಅಧಿಕಾರಿಗಳ ಜತೆ ಚರ್ಚಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ