Breaking News

ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ

Spread the love

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ.

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ’ ಎಂದು ಎಚ್ಚರಿಕೆ ರೂಪದಲ್ಲಿ ಸಂದೇಶ ನೀಡಿದ್ದಾರೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಯಾರೂ ಏನೇ ಹೇಳಿದರೂ ನಾವು ಯಡಿಯೂರಪ್ಪ ಪರ ಇದ್ದೇವೆ. ಅವರೇ ನಮ್ಮ ನಾಯಕರು. ಈ ನಿಟ್ಟಿನಲ್ಲಿ ನಾನು ಬಿಜೆಪಿ ಶಾಸಕರ ಸಹಿ ಸಂಗ್ರಹ ಮಾಡುತ್ತಿದ್ದೇನೆ ಎಂದು ಹೇಳಿದ್ದರು.

ರೇಣುಕಾಚಾರ್ಯ ಅವರ ಸಹಿ ಸಂಗ್ರಹ ಸುದ್ದಿಯ ಬಗ್ಗೆ ಅನೇಕ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಹಾದಿ ಬೀದಿಯಲ್ಲಿ ಚರ್ಚಿಸುವ ಸಂಗತಿಯಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಅವರು ಇಂದು, ‘ಕೋವಿಡ್ ಸಂಕಷ್ಟಕ್ಕೆ ಜನಕ್ಕೆ ಸ್ಪಂದಿಸಿ ಕೆಲಸ ಮಾಡಿ, ಸಿಎಂ ಬದಲಾವಣೆ ಚರ್ಚೆ ನಿಲ್ಲಿಸಿ’ ಎಂದು ಸೂಚ್ಯವಾಗಿ ಎಚ್ಚರಿಕೆ ನೀಡಿದ್ದಾರೆ.

 

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ