Breaking News

ಸಿಂಧೂರಿ ನೇಮಕ ಪ್ರಶ್ನಿಸಿದ್ದ ಅರ್ಜಿ: ಹೈಕೋರ್ಟ್‌ ನೋಟಿಸ್

Spread the love

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಿದ್ದ ಅರ್ಜಿ ಮರು ಪರಿಶೀಲಿಸಲು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿ ಆಧರಿಸಿ ಐಎಎಸ್ ಅಧಿಕಾರಿ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ಆದೇಶಿಸಿದೆ.

‘ರೋಹಿಣಿ ಸಿಂಧೂರಿ ಅವರನ್ನು ಬೇರೆ ಹುದ್ದೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರು ನ್ಯಾಯಮೂರ್ತಿ ಅರವಿಂದಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ಪೀಠ, ಅರ್ಜಿಯಲ್ಲಿ ಪ್ರತಿವಾದಿ ಆಗಿರುವ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ತಿಳಿಸಿ ವಿಚಾರಣೆಯನ್ನು ಜೂ.14ಕ್ಕೆ ಮುಂದೂಡಿತು. ಸಿಎಟಿ ಆದೇಶ ಪ್ರಶ್ನಿಸಿ ಶರತ್ ಅವರು ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಎರಡು ಅರ್ಜಿಗಳನ್ನು ಪೀಠ ಒಟ್ಟಿಗೆ ವಿಚಾರಣೆ ನಡೆಸುತ್ತಿದೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ