Breaking News

ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಿಂದ ಪ್ರಮಾಣವಚನ ಸ್ವೀಕಾರ

Spread the love

ಬೆಂಗಳೂರು : ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.

ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ,ಬೀದರ್ ಲೋಕಸಭಾ ಕ್ಷೇತ್ರದ ಸದಸ್ಯ ಭಗವಂತ ಖೂಬಾ ಹಾಗೂ ಕುಟುಂಬದ ಸದಸ್ಯರು ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಾಲಗಾರು ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಪರಭಾವಗೊಳಿಸಿದ್ದರು.

ಈ ಹಿಂದೆ ಶಾಸಕರಾಗಿದ್ದ ನಾರಾಯಣರಾವ್ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವೇಗೌಡ ತುರವಿಹಾಳ್ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು. ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು.


Spread the love

About Laxminews 24x7

Check Also

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the loveಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ