Breaking News

ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು

Spread the love

ಕಲಬುರಗಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.

21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಕಳೆದ ಎರಡೂವರೆ ವರ್ಷದ ಹಿಂದೆಯಷ್ಟೇ ವೀರಣ್ಣ ಎಂಬುವರ ಜೊತೆ ರಚಿತಾ ಮದುವೆಯಾಗಿತ್ತು.

ಸಿವಿಲ್ ಇಂಜಿನಿಯರ್ ಆಗಿರುವ ವೀರಣ್ಣ, ಮದುವೆ ಬಳಿಕ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೂಡ ಹಣ ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡಿ, ಗಲಾಟೆ ಮಾಡಿದ್ದ. ಇದರಿಂದ ಬೇಸತ್ತು ಮನೆಯಲ್ಲೇ ರಚಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಚಿತಾ ಸಾವು ಸಂಬಂಧ ಪತಿ ವೀರಣ್ಣ, ಮಾವ ಚಂದ್ರಕಾಂತ, ಅತ್ತೆ ಲಕ್ಷ್ಮಿಬಾಯಿ, ಮೈದುನ ಪವನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ