Breaking News

ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರ ಸಹಾಯ ಮಾಡದಿದ್ದರೆ ಪ್ರತಿಭಟನೆಯ ಎಚ್ಚರಿಕೆ

Spread the love

ನೆಲಮಂಗಲ: ರಾಜ್ಯ ಸರ್ಕಾರ ಗೂಡ್ಸ್ ವಾಹನ ಚಾಲಕರಿಗೆ ವಾಹನಗಳ ವಿಮಾಕಂತು ಹಾಗೂ ತೆರಿಗೆಗಳನ್ನು ಒಂದು ವರ್ಷ ಮುಂದೂಡುವ ಜೊತೆ ಚಾಲಕರಿಗೆ ಸಹಾಯವನ್ನು ಸರ್ಕಾರ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘ ಸಂಸ್ಥಾಪಕ ಅಧ್ಯಕ್ಷ ಎಂಪಿ ರವೀಶ್ ಎಚ್ಚರಿಕೆ ನೀಡಿದ್ದಾರೆ.

ನೆಲಮಂಗಲ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಮಾದವಾರದ ಬಳಿ ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘ ವತಿಯಿಂದ ಗೂಡ್ಸ್ ವಾಹನಗಳ ಚಾಲಕರಿಗೆ ಆಹಾರ ಪ್ಯಾಕೇಟ್ ನೀಡಿ ಮಾತನಾಡಿದ ಎಂಪಿ ರವೀಶ್, ಕೊರೊನಾ ಸಂಕಷ್ಟದಲ್ಲಿ ವೈದ್ಯಕೀಯ ಸಲಕರಣೆಗಳು, ದಿನಸಿ ಸಾಮಗ್ರಿಗಳು ಸೇರಿದಂತೆ ಪ್ರತಿಯೊಂದು ಸಾಮಗ್ರಿಗಳನ್ನು ಸಾಗಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಈಗಾಗಲೇ ಅನೇಕ ಚಾಲಕರು ಕೊರೊನಾ ಸೋಂಕಿನಿಂದ ನಲುಗುತ್ತಿದ್ದಾರೆ. ಸರಿಯಾದ ಬಾಡಿಗೆಗಳು ಸಿಗದೇ ಗೂಡ್ಸ್ ವಾಹನಗಳು ನಷ್ಟ ಅನುಭವಿಸುತ್ತಿದ್ದು ಸರ್ಕಾರ ನಮ್ಮ ವಾಹನಗಳ ಇಎಮ್‍ಐ ಪಾವತಿಯಲ್ಲಿ ವಿನಾಯಿತಿ, ವಿಮಾಕಂತು ಹಾಗೂ ತೆರಿಗೆಯನ್ನು ಒಂದು ವರ್ಷ ಮುಂದೂಡಬೇಕೆಂದು ಆಗ್ರಹಿಸಿದರು.ಗೂಡ್ಸ್ ವಾಹನ ಮಾಲೀಕರು ಹಾಗೂ ಚಾಲಕರ ಕಷ್ಟಕ್ಕೆ ಸರ್ಕಾರ ಸ್ಪಂದನೆ ನೀಡಬೇಕು, ನಮ್ಮ ಬೇಡಿಕೆಯ ಮನವಿ ಸ್ಪಂದನೆ ಸಿಗದಿದ್ದರೇ ರಾಜ್ಯಾದ್ಯಂತ ಗೂಡ್ಸ್ ವಾಹನಗಳನ್ನು ಸ್ಥಗಿತಗೊಳಿಸಿ ಹೋರಾಟ ಮಾಡಲಾಗುತ್ತದೆ ಎಂದರು. ಮಾದವರದ ಬಳಿ ಬೆಂಗಳೂರು ಹಾಗೂ ನೈಸ್ ರಸ್ತೆಯ ಮೂಲಕ ಹೋಗುವ ಗೂಡ್ಸ್ ವಾಹನಗಳ ಚಾಲಕರಿಗೆ ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘದಿಂದ ಒಂದು ಸಾವಿರದಷ್ಟು ನೀರಿನ ಬಾಟಲ್, ಆಹಾರದ ಪ್ಯಾಕೇಟ್ ಹಾಗೂ ಮಾಸ್ಕ್, ಸ್ಯಾನಿಟೈಸರ್ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷ ಹೆಚ್.ವಿಜಯಕುಮಾರ್, ರಾಜ್ಯಾಧ್ಯಕ್ಷ ಎಂ.ಮುನಿಕೃಷ್ಣ, ಉಪಾಧ್ಯಕ್ಷ ಕುಪ್ಪುಸ್ವಾಮಿ, ರಾಜ್ಯ ಸಹಕಾರ್ಯದರ್ಶಿ ರಮೇಶ್ ಮತ್ತಿತರರಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ