Breaking News

ನವದೆಹಲಿ : 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲ್ಲ; ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ

Spread the love

ನವದೆಹಲಿ : ಹೆಮ್ಮಾರಿ ಸೋಂಕಿಗೆ ಹೆದರದವರಿಲ್ಲ. ಡೆಡ್ಲಿ ಸೋಂಕಿನ 3ನೇ ಅವತಾರ ಮಕ್ಕಳಿಗೆ ಮಾರಕ ಎನ್ನುವ ಮಾತುಗಳು ಎಲ್ಲೇಡೆ ಸಾಮಾನ್ಯವಾಗದೆ. ಈ ಆತಂಕಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತೆರೆ ಎಳೆದಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೋಟ್ಯಾಂತರ ಪೋಷಕರಲ್ಲಿ ನೆಮ್ಮದಿ ತಂದಿದೆ. ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ಗುಲೆರಿಯಾ ಹೇಳಿದ್ದಾರೆ. ಆದರೆ ಮುಂಜಾಗ್ರತ ಕ್ರಮವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಸೇರಿದಂತೆ ಕೊರೊನಾ ನಿಯಮ ಪಾಲನೆ ಅತೀ ಅಗತ್ಯ ಎಂದಿದ್ದಾರೆ.

3ನೇ ಅಲೆ ಮಕ್ಕಳನ್ನು ಟಾರ್ಗೆಟ್ ಮಾಡಲಿದೆ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ. ಇನ್ನು 2ನೇ ಅಲೆಯಲ್ಲಿ ಮಕ್ಕಳ ಮೇಲೆ ಕೊರೊನಾ ಬಾಧಿಸಿದ ಸಂಖ್ಯೆ ಕಡಿಮೆ. ಮಕ್ಕಳಲ್ಲಿ ಮೈಲ್ಡ್ ಕೊರೊನಾ ಕಾಣಿಸಿಕೊಂಡಿದೆ. ಮಕ್ಕಳಲ್ಲಿ ಹೆಚ್ಚಾಗಿ ಮೈಲ್ಡ್ ಕೊರೊನಾ ಕಾಣಿಸಿಕೊಳ್ಳಬಹುದು. ಇತರ ಆರೋಗ್ಯ ಸಮಸ್ಯೆ ಇರುವ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಗುಲೆರಿಯಾ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ