ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ.
ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ ಸೇರಿ ಮೂವರು ಅಧಿಕಾರಿಗಳಿಗೆ ಗಾಯಗಳಾಗಿವೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Laxmi News 24×7