Breaking News
Home / ರಾಜ್ಯ / ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

Spread the love

ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಹೇಳಿದರು.

ವಾರಗಳ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ. ಇಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವಾಗ ರಾಜೀನಾಮೆ ನೀಡಲು ಹೇಳುತ್ತಾರೋ ಆಗಲೇ ಕೊಡುತ್ತೇನೆ ಎಂದಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಸಿಎಂ ಬದಲಾವಣೆಗೆ ಸ್ವಪಕ್ಷೀಯರ ಪ್ರಯತ್ನದ ಮಧ್ಯೆ ಸಿಎಂ ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಗುರುವಾರ ಈ ಗೊಂದಲಗಳಿಗೆ ತೆರ ಎಳೆಯುವ ಪ್ರಯತ್ನ ಮಾಡಿದ್ದರು. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನಾಗಲಿ, ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನಾಗಲಿ ಕೆಳಗಿಳಿಸುವ ಯಾವುದೇ ಯೋಚನೆ ಹೈಕಮಾಂಡ್ ಗೆ ಇಲ್ಲ ಎಂದಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

Spread the love ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ