Breaking News

ವಿದ್ಯುತ್ ದರ ಏರಿಕೆ ಖಂಡಿಸಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ

Spread the love

ಚಾಮರಾಜನಗರ: ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 30 ಪೈಸೆ ಏರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಮುಖಂಡರು ಒಂಟಿ ಕಾಲಿನಲ್ಲಿ ನಿಂತು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು.ನಾಗರಾಜು, ನಿಜಧ್ವನಿ ಗೋವಿಂದರಾಜು ಅವರು ನಗರದ ಸೆಸ್ಕಾಂ ಕಚೇರಿ ಮುಂದೆ ಒಂಟಿ ಕಾಲಿನಲ್ಲಿ ನಿಂತು ವಿದ್ಯುತ್ ದರ ಹೆಚ್ಚಳ ವಿರೋಧಿದರು.

ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೋವಿಡ್‌ನಿಂದ ಜನ ತತ್ತರಿಸಿ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಅರಿವಿದ್ದು ಇದ್ದೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ದರ ಹೆಚ್ಚಿಸಿದ್ದು, ಕೂಡಲೇ ರಾಜ್ಯ ಸರ್ಕಾರ ದರ ಏರಿಕೆಯನ್ನು ಕೈ ಬಿಟ್ಟು ಗ್ರಾಹಕರ ಹಿತ ಕಾಯಬೇಕೆಂದು ಒತ್ತಾಯಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ