Breaking News

ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ

Spread the love

ದಾವಣಗೆರೆ: ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್​​ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್​​ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್​​ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ.

ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.ಸೋಂಕಿತರ ಆಕ್ರೋಶಶಾಸಕ ರೇಣುಕಾಚಾರ್ಯ ಇಲ್ಲದೇ ಇದ್ದಾಗ ಕೋವಿಡ್​ ಕೇಂದ್ರದಲ್ಲಿ ಯಾವುದೇ ವ್ಯವಸ್ಥೆ ಸರಿಯಾಗಿರುವುದಿಲ್ಲ. ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆಯೂ ಇರುವುದಿಲ್ಲ. ಸ್ಥಳಕ್ಕೆ ತಹಸೀಲ್ದಾರ್ ಬರುವವರೆಗೂ ಊಟ ಮಾಡುವುದಿಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ