ಬೆಂಗಳೂರು: ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಮಧ್ಯೆ ಶಾಸಕ ಅರವಿಂದ ಬೆಲ್ಲದ್ ದೆಹಲಿ ಭೇಟಿಯು ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಹಿನ್ನೆಲೆಯಲ್ಲಿ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.
ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿಯಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಅರವಿಂದ್ ಬೆಲ್ಲದ್ ಹೇಳಿಕೆ ನೀಡಿದ್ದಾರೆ.
Laxmi News 24×7