Breaking News
Home / ರಾಜಕೀಯ / ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲ : ಡಿಕೆಶಿ

ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲ : ಡಿಕೆಶಿ

Spread the love

ಚಿತ್ರದುರ್ಗ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲವೆಂದು ಡಿಕೆಶಿ ಆಕ್ರೋಶ ಹೊರಹಾಕಿ, ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆ ಸೂಚನೆ ನೀಡಿದರು. ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟುಗೊಂಡ ಡಿಕೆಶಿ ಕಾರ್ಯಕರ್ತರ ವಿರುದ್ಧ ಗರಂ ಆದರು.

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಏರಿಕೆಯಾಗುತ್ತಿದೆ. ಅದೇ ರೀತಿ ರೈತರಿಗೆ ಬೆಂಬಲ ಬೆಲೆ ಹೆಚ್ಚಾಗಿ ಕೊಡುತ್ತಿದ್ದೀರಾ? ಸರ್ಕಾರಿ, ಖಾಸಗಿ ದಿನಗೂಲಿ ನೌಕರರ ಸಂಬಳ ಹೆಚ್ಚಿಸಿದ್ದೀರಾ? ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೆಪಿಸಿಸಿ ಅಧ್ಯಕ್ಷ ಪ್ರಶ್ನಿಸಿದ್ದಾರೆ. ಮನ್ರೇಗಾ ಯೋಜನೆಯ ಕೂಲಿ ಹಣವನ್ನೂ ಹೆಚ್ಚಳ ಮಾಡಿಲ್ಲ. ಕೇವಲ ಇವರ ಜೇಬು ಮಾತ್ರ ತುಂಬಬೇಕಾಗಿದೆ ಅಷ್ಟೆ. ನಾವು, ಜನಸಾಮಾನ್ಯರು ಸೇರಿ ಈ ಸರ್ಕಾರ ಕಿತ್ತೊಗೆಯಬೇಕು. ನಾಳೆ ಗ್ರಾಮ ಮಟ್ಟದಲ್ಲಿ ನಡೆಯುವ ಹೋರಾಟದಲ್ಲಿ ಮುಖಂಡರು ಭಾಗಿಯಾಗಬೇಕು. ಕಡ್ಡಾಯವಾಗಿ ಕಾಂಗ್ರೆಸ್ ಮುಖಂಡರು ಜನರಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಹೆಣ ಸುಡುವುದಕ್ಕೂ ಕ್ಯೂ, ಆಸ್ಪತ್ರೆಗೆ ದಾಖಲಾಗುವುದಕ್ಕೂ ಕ್ಯೂ, ಔಷಧಕ್ಕೂ ಕ್ಯೂ, ಲಸಿಕೆ ಪಡೆಯುವುದಕ್ಕೂ ಕ್ಯೂ ನಿಲ್ಲುವಂತಾಗಿದೆ. ಬಿಜೆಪಿ ಸರ್ಕಾರ ಇನ್ನೇನು ಜನರನ್ನು ಕಾಪಾಡುತ್ತದೆ. ಹೆಣದಲ್ಲೂ ಹಣ, ಔಷಧಿಯಲ್ಲೂ ಹಣ ಲೂಟಿ ಮಾಡುತ್ತಿದ್ದಾರೆ. ಈ ದೇಶಕ್ಕೆ ಕೊರೊನಾ ಕಾಯಿಲೆ ತಂದದ್ದು ಯಾರೆಂದು ಪ್ರಶ್ನಿಸಿದ ಅವರು ದೇಶದ ಜನತೆ ಬಿಜೆಪಿ ಸರ್ಕಾರವನ್ನು ಉಗಿಯುತ್ತಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

Spread the love ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ