Breaking News
Home / ಜಿಲ್ಲೆ / ಕೋಲಾರ / ಕೋಲಾರ ಸೇಫ್: ಸೊಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

ಕೋಲಾರ ಸೇಫ್: ಸೊಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

Spread the love

ಕೋಲಾರ: ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 18 ಜನರ ವರದಿ ನೆಗೆಟಿವ್ ಬಂದಿದ್ದು, ಕೋಲಾರ ಜನತೆ ಹಾಗೂ ಜಿಲ್ಲಾಡಳಿತ ಕೋವಿಡ್ ಆತಂಕದಿಂದ ಕೊಂಚ ನಿರಾಳವಾಗಿದೆ.

ಜಿಲ್ಲೆಯ ಎರಡು ಕುಟುಂಬಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲ್ ನರಸಾಪುರದ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಪರಿಣಾಮ ಜಿಲ್ಲೆಯ ಸುಮಾರು 21 ಜನರನ್ನು ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಅಲ್ಲದೆ 21 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 18 ಜನರ ವರದಿ ನೆಗಟಿವ್ ಬಂದಿದೆ. ಉಳಿದ ಮೂವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಸಧ್ಯಕ್ಕೆ ಕೊರೊನಾ ಆತಂಕದಿಂದ ಕೊಂಚ ನಿರಾಳವಾಗಿದೆ.

ಕೋಲಾರ ಗಡಿಭಾಗವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೈಲು ನರಸಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೊರೊನಾ ಸೋಂಕಿತ ವ್ಯಕ್ತಿ, ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಎರಡು ಕುಟುಂಬಗಳೊಂದಿಗೆ ಸಂಪರ್ಕ ಹೊಂದಿದ್ದ. ಹೀಗಾಗಿ ನರಸಾಪುರ ಗ್ರಾಮದ ಸುಮಾರು 21 ಜನರನ್ನ ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಈ ಮೂಲಕ ನರಸಾಪುರ, ವೇಮಗಲ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದೀಗ 18 ಜನರ ವರದಿ ನೆಗಟಿವ್ ಬಂದಿರುವ ಹಿನ್ನಲೆ ನರಸಾಪುರ ಗ್ರಾಮದ ಜನತೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸಧ್ಯಕ್ಕೆ ನಿರಾಳವಾಗಿರುವ ಜಿಲ್ಲಾಡಳಿತ ಮೂವರ ವರದಿಗಾಗಿ ಕಾದುಕುಳಿತಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ