Breaking News

ವೈದ್ಯಕೀಯ ವಸ್ತುಗಳ ಮೇಲಿನ ತೆರಿಗೆ ಕಡಿತ: ನಿರ್ಮಲಾ ಸೀತಾರಾಮನ್

Spread the love

ನವದೆಹಲಿ: ಇಂದು ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು ಚರ್ಚಿಸಲಾಗಿದೆ.

Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ.

ಈ ಕುರಿತು ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ