Breaking News

ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ,ಸೀಲ್ ಡೌನ್ ಮಾಡಿದ ಅಧಿಕಾರಿಗಳು

Spread the love

ಬೆಳಗಾವಿ:  ಇಲ್ಲಿಯ ಟಿಳಕವಾಡಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.

ಟಿಳಕವಾಡಿಯ ರಾಯ್ ರೋಡ್ ನ ಶ್ರೀಗಂಧ ಅಪಾರ್ಟ್ ಮೆಂಟ್ ನಲ್ಲಿ 7 ಜನರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಒಂದೇ ಮನೆಯಲ್ಲಿ ನಾಲ್ವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ, ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯ ಮೂವರಲ್ಲಿ ಸೋಂಕು ದೃಢಪಟ್ಟಿದೆ.

ಇಡೀ ಅಪಾರ್ಟ್ ಮೆಂಟ್ ನ್ನು ಪಾಲಿಕೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಅಲ್ಲದೇ ಆರೋಗ್ಯಾಧಿಕಾರಿಗಳು ಅಪಾರ್ಟ್ ಮೆಂಟ್ ನಲ್ಲಿರುವ ಪ್ರತಿಯೊಬ್ಬರ ಸ್ವಾಬ್ ಕಲೆಕ್ಟ್ ಮಾಡಿದ್ದು, ಜನರಿಗೆ ಮುನ್ನೆಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ.

ಈ ನಡುವೆ ವಾರ್ಡ್ ನಂ.53, 54ನ್ನು ಮೈಕ್ರೋಕಂಟೇನ್ಮೆಂಟ್ ಪ್ರದೇಶವೆಂದು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಸೂಚನೆಯಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ