ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು.
ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಆರೋಪಿ ಜಗದೀಶ್ ಎಂಬಾತ ಡಾಕ್ಟರ್ ಮೇಲೆ ಮೊಬೈಲ್ ಎಸೆದು ಹಲ್ಲೆ ನಡೆಸಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.