Breaking News

ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

Spread the love

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 38 ವರ್ಷದ `ಸಂಚಾರಿ ವಿಜಯ್’ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಶನಿವಾರ ರಾತ್ರಿ 11:45ರ ಸುಮಾರಿಗೆ ಬೆಂಗಳೂರಿನ ಜೆಪಿನಗರದ 7ನೇ ಹಂತದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ವಿಜಯ್ ತಲುಪಿದ್ದರು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ವಿಜಯ್ ಅವರ ಅಂಗಾಗವನ್ನು ದಾನ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

ಕುಟುಂಬದ ಇಚ್ಛೆಯಂತೆ 2 ಕಿಡ್ನಿ, 2 ಕಣ್ಣು, ಯಕೃತ್ತು, ಶ್ವಾಸಕೋಶ, 2 ಹೃದಯದ ಕವಾಟಗಳನ್ನು ದಾನ ಮಾಡಿ ಅಂಗಾಂಗ ಕಸಿಗಾಗಿ ಕಾಯುತ್ತಿದ್ದವರಿಗೆ ಜೋಡಿಸಲಾಯಿತು.

ಬೆಳಗ್ಗೆ 6:50ಕ್ಕೆ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ವಿಜಯ್ ಕುಟುಂಬಕ್ಕೆ ನೀಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಗೆ ಮೃತ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ