Breaking News

ರವೀಂದ್ರ ಕಲಾಕ್ಷೇತ್ರಕ್ಕೆ ಬಂದ ವಿಜಯ್​ ಪಾರ್ಥಿವ ಶರೀರ, ಸ್ನೇಹಿತನ ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

Spread the love

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ​ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದರು. ಬೆಳಗ್ಗೆ 8ಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣಕ್ಕೆ ವಿಜಯ್​ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

ಇಂದು ಬೆಳಗ್ಗೆ 10.30ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್​ರ ಅಂತಿಮ ದರ್ಶನಕ್ಕೆ ಸರ್ಕಾರದ ಕಡೆಯಿಂದಲೇ ವ್ಯವಸ್ಥೆ ಮಾಡಲಾಗಿದ್ದು, ನಂತರ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತೆ. ಹುಟ್ಟೂರಿನಲ್ಲಿ ಒಂದು ತಾಸು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಬಳಿಕ ಸ್ವಗ್ರಾಮದಲ್ಲೇ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಸರದಿ ಸಾಲಿನಲ್ಲಿ ನಿಂತು ವಿಜಯ್​ ಪಾರ್ಥಿವ ಶರೀರ ದರ್ಶನ ಪಡೆಯುತ್ತಿದ್ದಾರೆ. ನಟರಾದ ಸತೀಶ್ ನೀನಾಸಂ, ಮುಖ್ಯಮಂತ್ರಿ ಚಂದ್ರು, ರಂಗಾಯಣ ರಘು, ನಿರ್ದೇಶಕ ಲಿಂಗದೇವರು, ಗುರುದೇಶಪಾಂಡೆ ಸೇರಿದಂತೆ ಹಲವು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ