Breaking News

ನಟ ಚೇತನ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ದೂರು ದಾಖಲು

Spread the love

ತುಮಕೂರು: ಬ್ರಾಹ್ಮಣ ಸಮುದಾಯದ ವಿರುದ್ದ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ನಟ ಚೇತನ್ ವಿರುದ್ದ ಕುಣಿಗಲ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಚೇತನ್ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯದ ಗೌರವಕ್ಕೆ ಧಕ್ಕೆ ಉಂಟಾಗಿದೆ. ಅವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನ ಮಾಡಿದ್ದಾರೆ ಎಂದು ಶ್ರೀರಾಮ ಸೇವಾ ಮಂಡಳಿ ಹಾಗೂ ಬ್ರಾಹ್ಮಣ ಸಂಘ ದೂರು ನೀಡಿದೆ. ಕೂಡಲೆ ನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

 

 

ಅಂದ್ಹಾಗೆ ಇದೇ ವಿಚಾರವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ಈಗಾಗಲೇ ಚೇತನ್ ವಿರುದ್ಧ ಪ್ರಕರಣ ದಾಖಲಾಗಿದೆ. ಬ್ರಾಹ್ಮಣರು ಭಯೋತ್ಪಾದಕರು ಎಂದು ಹೇಳಿದ್ದ ವಿಡಿಯೋವನ್ನ ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದರು. ಹೀಗಾಗಿ ಈ ಹೇಳಿಕೆಗೆ ಬ್ರಾಹ್ಮಣ ಸಮುದಾಯ ಕೆಂಡಾಮಂಡಲವಾಗಿದ್ದಾರೆ. ವಿಪ್ರ ಯುವ ವೇದಿಕೆ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐಪಿಸಿ 153(B) 295(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ