Breaking News
Home / ಜಿಲ್ಲೆ / ಲಾಕ್‍ಡೌನ್ ಪಾಲಿಸದಿದ್ರೆ ಸೀಲ್‍ಡೌನ್: ಸಿಎಂ ಎಚ್ಚರಿಕೆ

ಲಾಕ್‍ಡೌನ್ ಪಾಲಿಸದಿದ್ರೆ ಸೀಲ್‍ಡೌನ್: ಸಿಎಂ ಎಚ್ಚರಿಕೆ

Spread the love

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಕರ್ನಾಟಕದಲ್ಲಿ 15 ದಿನ ಲಾಕ್‍ಡೌನ್ ವಿಸ್ತರಿಸಲಾಗಿದೆ. ಮುಂದಿನ 2 ವಾರ ಲಾಕ್‍ಡೌನ್ ಬಹಳ ಕಠಿಣವಾಗಿರುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ನಾಲ್ಕು ಗಂಟೆಗಳ ಕಾಲ ಸಂವಾದ ನಡೆಸಿದ್ದಾರೆ. ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದರು. 2.44 ಲಕ್ಷ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಕಿಟ್, ಮಾಸ್ಕ್ ಗಳನ್ನ ಪೊರೈಸಲಾಗುವುದು, ಏಪ್ರಿಲ್ 30ರ ಒಳಗೆ 300 ಲ್ಯಾಬ್ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಲಾಕ್‍ಡೌನ್‍ನಿಂದ ಮೀನುಗಾರಿಕೆ, ಕೃಷಿ, ಕೈಗಾರಿಕಾ, ಕಾರ್ಮಿಕರಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಚಟುವಟಿಗೆ ನಡೆಸಬಹುದುದಾಗಿದೆ. ಉಳಿದವರು ಲಾಕ್‍ಡೌನ್ ಪಾಲಿಸದೇ ಇದ್ದರೆ ಸೀಲ್‍ಡೌನ್ ಜಾರಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರವಾಸಿಗಳನ್ನು ಹಳ್ಳಿಗಳಿಗೆ ಕಳುಹಿಸಬಾರದು. ಮೀನುಗಾರಿಕೆಗೆ ವಿನಾಯ್ತಿ ನೀಡಿದ್ದಾರೆ. ಆರೋಗ್ಯ ಸೇತು ಮೊಬೈಲ್ ಆಪ್ ಜನಪ್ರಿಯಗೊಳಿಸಲು ಪ್ರಧಾನಿ ಸಲಹೆ ನೀಡಿದ್ದಾರೆ. ಆದರೆ ಲಾಕ್‍ಡೌನ್ ಸಡಿಲ ಮಾಡಬಾರದು. ಮುಂದಿನ 15 ದಿನ ಲಾಕ್‍ಡೌನ್ ಅನಿವಾರ್ಯವಾಗಿದೆ, ಏಪ್ರಿಲ್ 30ರ ತನಕ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸ್ತಾರೆ ಎಂದು ಸಿಎಂ ಹೇಳಿದರು


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

Spread the loveಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ