ಕಳೆದ ಎರಡ್ಮೂರು ತಿಂಗಳ ಹಿಂದೆ ಮೂಡಲಗಿ ಮತ್ತು ಗೋಕಾಕ್ ವ್ಯಾಪ್ತಿಯಲ್ಲಿ ಗ್ರೇಡ್ -2 ತಹಸಿಲ್ದಾರ್, ಕಂದಾಯ ನೀರಿಕ್ಷಕರು ಮತ್ತು ಗ್ರಾಮಲೆಕ್ಕಾಧಿಕಾರಿಗಳು ಸೇರಿ ಸುಳ್ಳು ಜಾತಿ ಪ್ರಮಾಣಪತ್ರ ವಿತರಿಸುವ ಕಾಯಕ ಮಾಡಿಕೊಂಡು ಸಾವಿರಾರು ರೂಪಾಯಿ ಹಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶಿಸಿದರು.
ಇದರ ಬಗ್ಗೆ ಹಲವಾರು ಬಾರಿ ಗೋಕಾಕ್ ತಹಸಿಲ್ದಾರ್ ಅವರಿಗೆ ಮೌಖಿಕವಾಗಿ ಹಾಗೂ ಲಿಖಿತ ರೂಪದಲ್ಲಿಉ ಮನವಿ ಮಾಡಿದ್ದೇವೆ. ಆದರೂ ಸಹ ನಿರ್ಲಕ್ಷ ತೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇಂದು ಗೋಕಾಕ್ ತಾಲ್ಲೂಕು ಪಂಚಾಯತ್ ಸಭಾ ಭವನದಲ್ಲಿ ಎರ್ಪಡಿಸಿದ್ದ ಪರಿಶಿಷ್ಟ ಜಾತಿ ಕುಂದು ಕೊರತೆ ಸಭೆಯಲ್ಲಿ ದಲಿತರು ತಹಶಿಲ್ದಾರ್ ವಿರುದ್ದ ದಿಕ್ಕಾರ ಕೂಗುತ್ತ ಸಭೆಯನ್ನು ಬಹಷ್ಕರಿಸಿದರು.
ಅದಲ್ಲದೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದವರ ಮತ್ತು ಪಡೆದುಕೊಂಡ ಇಬ್ಬರ ವಿರುದ್ದವೂ ಪ್ರಕರಣ ದಾಖಲು ಮಾಡಿಕೊಳ್ಳಲು ಒತ್ತಾಯಿಸಿದರು.
ಇದರ ಜೊತೆಯಲ್ಲಿಯೆ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು ವಿರುದ್ದ ದೂರು ನೀಡಿದ ದಲಿತ ಮುಖಂಡರಿಗೆ ಜೀವ ಬೆದರಿಕೆ ಹಾಕುತಿದ್ದಾರೆ ಎಂಬ ಹಿನ್ನಲೆಯಲ್ಲಿ ಗೋಕಾಕ ನಗರ ಪೊಲೀಸ್ ಠಾಣೆಯಲ್ಲಿ ದಲಿತ ಮುಖಂಡರು ಪ್ರಕರಣ ದಾಖಲಿಸಿದರು.
ಒಂದು ವೇಳೆ ಫೇಕ್ ಪ್ರಮಾಣ ಪತ್ರ ಪಡೆದುಕೊಂಡವರ ಮೇಲೆ ಕ್ರಮಿನಲ್ ಪ್ರಕರಣ ದಾಖಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.