Breaking News

ಬ್ರಾಹ್ಮಣರ ವಿರುದ್ಧ ಅವಹೇಳನ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್

Spread the love

ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೇಸ್​ ದಾಖಲಾಗಿರೋ ಹಿನ್ನೆಲೆ, ಇಂದು ನಟ ಚೇತನ್ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ಬಸವನಗುಡಿ ಪೊಲೀಸ್ರು ಚೇತನ್​ಗೆ ನೋಟೀಸ್ ನೀಡಿದ್ದರು. ಹೀಗಾಗಿ ತಮ್ಮ ಸ್ನೇಹಿತರು ಹಾಗೂ ವಕೀಲರ ಜೊತೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಚೇತನ್ ವಿರುದ್ಧ ದೂರು ನೀಡಿದ್ದರು. ಇದರ ಅನ್ವಯ ಬಸವನಗುಡಿ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚೇತನ್​ಗೆ ಸೂಚಿಸಿದ್ದರು.

ಕಳೆದ ಒಂದುವರೆ ಗಂಟೆಯಿಂದಲೂ ಚೇತನ್​​ರ ವಿಚಾರಣೆ ನಡೆಸುತ್ತಿರುವ ಪೊಲೀಸರು, ಫೇಸ್ ಬುಕ್​ನಲ್ಲಿ ಹಾಕಿರೋ ಪೋಸ್ಟ್ಗಳ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ