Breaking News

ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

Spread the love

ಕಲಬುರಗಿ: ಜಿಮ್ಸ್ ಆಸ್ಪತ್ರೆ ಕೋವಿಡ್ ವಾರ್ಡ್ ನಲ್ಲಿ ಅತ್ಯಾಚಾರ ಯತ್ನಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಜೂನ್ 8ರ ರಾತ್ರಿಯಂದು ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ವಾರ್ಡ್ ಪ್ರವೇಶಿಸಿದ್ದಾನೆ. ಈ ವೇಳೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯ ಬಳಿ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಕೂಡಲೇ ಎಚ್ಚೆತ್ತ ಯುವತಿ ಚೀರಾಟ ನಡೆಸಿದ್ದಾಳೆ. ಆ ವೇಳೆ ಅಕ್ಕ ಪಕ್ಕದ ಬೆಡ್ ನಲ್ಲಿ ಮಲಗಿದ್ದವರು ಎಚ್ಚರಗೊಂಡಾಗ ಪಿಂಟು ಪರಾರಿಯಾಗಿದ್ದ. ಘಟನೆಯ ಬಳಿಕ ಬ್ರಹ್ಮಪೂರ ಪೊಲೀಸರು ಪಿಂಟುನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. 

 


Spread the love

About Laxminews 24x7

Check Also

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಮುನಿಯಪ್ಪ

Spread the loveಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ