ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ
ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ
ಮಠಾಧೀಶರು ದೆಹಲಿಯ ಸಂಸತ್ತಿನ
ಎದುರು ಮೆರವಣಿಗೆ ನಡೆಸಬೇಕಾ
ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು.
ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು
ದಿಲ್ಲ. ಎಲ್ಲ ಸಮುದಾಯಗಳ ಏಳಿಗೆಗಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬೇರುಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹಾಗಾಗಿ, ಅವರಿಗೆ ಅವಧಿ ಪೂರ್ಣಗೊಳಿಸಲು ಬಿಡಬೇಕು. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದರು.
‘
Laxmi News 24×7