Breaking News

10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ರೈಲ್ವೆಯಲ್ಲಿ 3591 ಹುದ್ದೆಗಳ ನೇಮಕಾತಿಗೆ ಅರ್ಜಿ

Spread the love

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ವರ್ಗದವರಿಗೆ 100 ರೂ. ಅರ್ಜಿ ಶುಲ್ಕವಿದ್ದು ಜೂನ್ 24 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ www.rrc-wr.com ಸಂಪರ್ಕಿಸಬಹುದಾಗಿದೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ