ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ.
ನಾಯಕತ್ವ ಬದಲಾವಣೆ ಬಗ್ಗೆ ಧ್ವನಿಯೆತ್ತಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಉಸ್ತುವಾರಿ ರಾಜ್ಯಕ್ಕೇ ಬಂದರೂ ಭೇಟಿಯಾಗದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎರಡು ತಿಂಗಳ ಹಿಂದೆಯೇ ಕ್ರಮಕೈಗೊಳ್ಳಲಾಗಿದೆ ಎಂದು ನಿನ್ನೆಯಷ್ಟೇ ಅರುಣ್ ಸಿಂಗ್ ಹೇಳಿದ್ದರು.