Breaking News

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ,ಎಲ್ಲಾ ಇಲಾಖೆಗಳಲ್ಲೂ ಮೂಗು ತೂರಿಸುತ್ತಾರ ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಭ್ರಷ್ಟಾಚಾರ : ವಿಶ್ವನಾಥ್ ಆರೋಪ

Spread the love

ಬೆಂಗಳೂರು: ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ತರಾತುರಿಯಲ್ಲಿ ಟೆಂಡರ್‌ ಕರೆದು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆರೋಪಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಅವರು, ‘ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ. ಸುಮಾರು ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಹಣ ಪಡೆಯಲಾಗಿದೆ’ ಎಂದು ಅವರು ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದರು.

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಂದ ಆಡಳಿತದಲ್ಲಿ ಹಸ್ತಕ್ಷೇಪ ನಡೆದಿದೆ. ಎಲ್ಲಾ ಇಲಾಖೆಗಳಲ್ಲೂ ಮೂಗು ತೂರಿಸುತ್ತಾರೆ. ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಪ್ರಕರಣ ಇದೆ. ಅದಕ್ಕಾಗಿ ಅವರು ಆಗ್ಗಾಗ್ಗೆ ದೆಹಲಿಗೆ ಹೋಗುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರು ಮಕ್ಕಳಿಂದ ಜೈಲಿಗೆ ಹೋಗಿದ್ದರು. ಎರಡನೇ ಬಾರಿ ಅಂತಹ ಸ್ಥಿತಿ ಬರಬಾರದು ಎಂದು ವಿಶ್ವನಾಥ್‌ ಹೇಳಿದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ