Breaking News

ಇಬ್ಬರು ಮಕ್ಕಳ ಮೇಲೆ ತಂದೆಯಿಂದಲೇ ನಿರಂತರ ಮಾನಭಂಗ

Spread the love

ಮಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ತಂದೆಯೇ ನಿರಂತರ ಮಾನಭಂಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದೀಗ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

42 ವರ್ಷದ ವ್ಯಕ್ತಿ ಕೆಲವು ದಿನಗಳ ಹಿಂದೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ. ಇದಾದ ಬಳಿಕ ಪತ್ನಿ ತನ್ನ ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಹೆಣ್ಣು ಮಕ್ಕಳ ತಂದೆಯ ಅನಾಚಾರದ ಬಗ್ಗೆ ಬಾಯ್ಬಿಟ್ಟಿದ್ದರು. ಕಳೆದೊಂದು ವರ್ಷದಿಂದ ತಂದೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ಬಳಿಕ ತಾಯಿ ಹಾಗೂ ಸಂತ್ರಸ್ತ ಮಕ್ಕಳು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Spread the love ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ