Breaking News

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

Spread the love

ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ.

ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ ಶಸ್ತ್ರಚಿಕಿತ್ಸಾ ಸೌಲಭ್ಯಗಳು ಕೂಡ ದೊರೆಯಲಿವೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಯಾಗಲು ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.

 

ಒಂದು ವೇಳೆ ತಮ್ಮ ಊರಿನಲ್ಲಿಯೇ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆಗಳ ತನಕ ಉರ್ಜಿತವಾಗಿರುತ್ತದೆ. ಇಲ್ಲವಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಗೊಳಿಸುವ ಮೊದಲು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು.

 

ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು.

 

ಎಲ್ಲ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪ್ರತಿ ರೋಗಿಯೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ