ಬೆಂಗಳೂರು: ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್ ರೇಟ್ ಎರಡೂ ಕೂಡ ಇಳಿಕೆ ಕಂಡಿದೆ.
ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಸೋಮವಾರದಿಂದ ಜನರಿಗೆ ಮತ್ತಷ್ಟು ರಿಲೀಫ್ ನೀಡೋಕೆ ಮುಂದಾಗಿದೆ. ಅನ್ಲಾಕ್- 2 ರ ವಿಚಾರವಾಗಿ ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಯಾವ ಸೇವೆಗಳಿಗೆಲ್ಲ ವಿನಾಯತಿ ನೀಡಬಹುದೆಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
Laxmi News 24×7