Breaking News

ಮೂರು ಫಂಡ್‍ಗೆ ತಲಾ 1 ಲಕ್ಷ ಪಿಂಚಣಿ ದೇಣಿಗೆ ನೀಡಿದ ದೇವೇಗೌಡ್ರು

Spread the love

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಪಿಂಚಣಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.

ದೇವೇಗೌಡರು ಪಿಎಂ ಕೇರ್ಸ್ ಫಂಡ್, ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ತಲಾ ಒಂದೊಂದು ಲಕ್ಷ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

“ಕೊರೊನಾ ನಿಯಂತ್ರಣ ನಿಧಿಗೆ ನಾನು ಪಡೆಯುವ ಪಿಂಚಣಿ ಹಣವನ್ನು ನೀಡುತ್ತಿದ್ದೇವೆ. ಪಿಎಂ ಕೇರ್ಸ್ ಫಂಡ್, ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 1 ಲಕ್ಷ ನೀಡುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಕೊರೊನಾ ಪರಿಹಾರ ನಿಧಿಗೆ ದೇವೇಗೌಡರು ಮೂರು ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡುತ್ತಿದ್ದಾರೆ. ಮಹಾಮಾರಿ ಕೊರೊನಾ ವೈರಸ್‍ಗೆ ಇಡೀ ದೇಶವೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿದೆ. ಹೀಗಾಗಿ ಪಿಎಂ, ಸಿಎಂ ಕೊರೊನಾ ಪರಿಹಾರ ನಿಧಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಅನೇಕರು ಕೊರೊನಾ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ