ನವದೆಹಲಿ: ಕೋವಿಡ್ 19 ಸೋಂಕು ಹಾಗೂ ಸಕ್ರಿಯ ಪ್ರಕರಣಗಳ ಇಳಿಕೆಯ ಆಧಾರದ ಮೇಲೆ ಕೋವಿಡ್ ಲಾಕ್ ಡೌನ್ ನಿರ್ಬಂಧಗಳನ್ನು ಐದು ಹಂತಗಳಲ್ಲಿ ಸಡಿಲಿಕೆ ಮಾಡಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶನಿವಾರ(ಜೂನ್ 19) ಸಲಹೆ ನೀಡಿದೆ.
ರಾಜ್ಯ ಸರ್ಕಾರಗಳು ಕೋವಿಡ್ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಜತೆಗೆ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಲಸಿಕೆ ಸೇರಿದಂತೆ ಹೀಗೆ ನಾಲ್ಕು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದೆ.
ಈ ಕುರಿತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ರವಾನಿಸಲಾಗಿದೆ ಎಂದು ಕೇಂದ್ರ ಗೃಹಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ತಿಳಿಸಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ರೂಪಾಂತರಿ ವೈರಸ್ ಅನ್ನು ತಡೆಗಟ್ಟುವುದು ಸವಾಲಿನ ಕಾರ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಸೋಂಕು ಹರಡುವಿಕೆ ತಡೆಯಲು ಲಸಿಕೆ ಹಾಕುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕಾಗಿದೆ. ಆದ್ದರಿಂದ ಎಲ್ಲಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆ ನೀಡುವಿಕೆ ಪ್ರಕ್ರಿಯೆಯನ್ನು ಇನ್ನಷ್ಟು ತ್ವರಿತಗೊಳಿಸಬೇಕು ಎಂದು ಭಲ್ಲಾ ತಿಳಿಸಿದ್ದಾರೆ.
Laxmi News 24×7