Breaking News

ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್

Spread the love

ಪಣಜಿ : ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೆಯೇ ಬಿಜೆಪಿಗೆ ಸೇರಿರುವ 10 ಜನ ಶಾಸಕರಿಗೆ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಗೋವಾದ ಮಡಗಾಂವ ಹಾಗೂ ಪಣಜಿ ಸಮೀಪದ ಸಂತಾಕ್ರೂಜ್‍ನಲ್ಲಿ ಉಚಿತ ಸಸಿ ವಿತರಿಸಿದ ನಂತರ ಸುದ್ಧಿಗಾರರಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು.

ಕಾಂಗ್ರೇಸ್ ಪಕ್ಷದಿಂದ ಬಿಜೆಪಿ ಸೇರಿರುವ 10 ಜನ ಶಾಸಕರಿಗೆ ಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಸ್ಫರ್ಧಿಸಲು ಟಿಕೇಟ್ ನೀಡಲಾಗುವುದು ಎಂಬ ಭೀತಿ ಕಾಂಗ್ರೇಸ್ ಪಕ್ಷದಲ್ಲಿ ಮನೆ ಮಾಡಿತ್ತು. ಆದರೆ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಈ ಕುರಿತು ನೀಡಿರುವ ಹೇಳಿಕೆಯಿಂದಾಗಿ ಇದೀಗ ಸ್ಪಷ್ಟ ಉತ್ತರ ಸಿಕ್ಕಿದಂಂತಾಗಿದೆ. ಬಿಜೆಪಿ ಸೇರಿರುವ 10 ಜನ ಕಾಂಗ್ರೇಸ್ ಶಾಸಕರಿಗೆ ಕಾಂಗ್ರೇಸ್ ಮನೆಯ ಬಾಗಿಲು ಮುಚ್ಚಿದಂತಾಗಿದೆ.

ಕಾಂಗ್ರೇಸ್ ಪಕ್ಷದಿಂದ ಬಿಜೆಪಿ ಸೇರಿರುವ 10 ಜನ ಶಾಸಕರನ್ನು ಅನರ್ಹಗೊಳಿಸುವಂತೆ ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿಯ ಅಧ್ಯಕ್ಷ ಗಿರೀಶ್ ಚೋಡಣಕರ್ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠದ ಮೆಟ್ಟಿಲೇರಿದ್ದಾರೆ.


Spread the love

About Laxminews 24x7

Check Also

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

Spread the love ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ