Breaking News

ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡುವ ಕಾರ್ಯಕ್ರಮ

Spread the love

ಬೆಳಗಾವಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಅವರು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಎಲ್ಲಾ ರೀತಿಯ ಬೆಂಬಲಗಳನ್ನು ನೀಡಲು ಮುಂದೆ ಬರುವ ವ್ಯಕ್ತಿಗಳು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರಾಗಿ ಕಾರ್ಯದರ್ಶಿ ಕರು ಎಂದು ಗುರುತಿಸಿ ಅವರಿಗೆ ಯಶಸ್ವಿ ಕಾರ್ಯದರ್ಶಿಕರಾಗಿ ಕಾರ್ಯನಿರ್ವಹಿಸಲು ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಸೂಕ್ತ ತರಬೇತಿಯನ್ನು ನೀಡಲಾಗುವುದು.

ಕೋವಿಡ್ ಸಮಯದಲ್ಲಿ ತಂದೆಯ ಅಥವಾ ತಾಯಿಯನ್ನು ಕಳೆದುಕೊಂಡು ಅಥವಾ ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ ಅವರ ಸರ್ವತೋಮುಖ ಬೆಳವಣಿಗೆಗೆ ಬೆಂಬಲ ಹಾಗೂ ಸಹಾಯ ನೀಡಲು ಇದೊಂದು ಸುವರ್ಣಾವಕಾಶವಾಗಿದ್ದು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವವರಿಗೆ ಇಲಾಖೆಯ ವತಿಯಿಂದ ಯಾವುದೇ ಶುಲ್ಕ ಗೌರವಧನವನ್ನು ಪಾವತಿಸಲಾಗುವುದಿಲ್ಲ.

ಇದೊಂದು ಸಾಮಾಜಿಕ ಜವಾಬ್ದಾರಿಯಾಗಿದ್ದು ಸರ್ಕಾರಿ ಬಾಲ ಹಿತೈಷಿ ಯೋಜನೆಯಡಿ ಆಸಕ್ತರು ಸೇವೆ ಸಲ್ಲಿಸಲು ಜಾಲತಾಣ www.icps.karnataka.gov.in ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು 30ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಳಗಾವಿ ಇವರಿಗೆ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆಯನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಎರಡನೇ ಮಹಡಿ ಕೊಠಡಿ ಸಂಖ್ಯೆ 204 ಸುವರ್ಣ ವಿಧಾನಸೌಧ ಬೆಳಗಾವಿ ಇವರಿಂದ ಪಡೆಯಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2474111, 9480661888 ಅಥವಾ ಜೆ. ಟಿ. ಲೋಕೇಶ್ ನೋಡೆಲ್ ಅಧಿಕಾರಿ 9731610464ನ್ನು ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ರತ್ನಾಕರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ