Breaking News

81 ದಿನಗಳ ಬಳಿಕ 60 ಸಾವಿರಕ್ಕಿಂತ ಕಡಿಮೆ ಕೋವಿಡ್‌ ಪ್ರಕರಣ

Spread the love

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ಕಳೆದ 24ಗಂಟೆಗಳಲ್ಲಿ 58,419 ಕೋವಿಡ್ ಪ್ರಕರಣ ವರದಿಯಾಗಿದ್ದು, 1,576 ಮಂದಿ ಸಾವನ್ನಪ್ಪಿದ್ದಾರೆ.

81 ದಿನಗಳಲ್ಲಿ ಇದೇ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣ ವರದಿಯಾಗಿದೆ. ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದೆ ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೇರಳದಲ್ಲಿ 12,443 ಪ್ರಕರಣ, ಮಹಾರಾಷ್ಟ್ರದಲ್ಲಿ 8,912 ಕೋವಿಡ್ ಪ್ರಕರಣ, ತಮಿಳುನಾಡು 8,183, ಕರ್ನಾಟಕ 5,815 ಹಾಗೂ ಆಂಧ್ರಪ್ರದೇಶದಲ್ಲಿ 5,674 ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ