Breaking News

ಆಂಬುಲೆನ್ಸ್ ನಿಂದ ಜಿಗಿದು ರಸ್ತೆ ಮಧ್ಯೆದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ!

Spread the love

ಚಲಿಸುತ್ತಿದ್ದ ಆಂಬುಲೆನ್ಸ್ ನಿಂದ ಜಿಗಿದ ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಮಧ್ಯೆದಲ್ಲೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರು ಜಿಲ್ಲೆಯ ತಿ‌. ನರಸೀಪುರ ತಾಲೂಕಿನಲ್ಲಿ ನಡೆದಿದೆ.

ತಿ. ನರಸೀಪುರ ತಾಲೂಕಿನ ಕನ್ನಳ್ಳಿ ಮೋಳೆ ಗ್ರಾಮದ ಶಿವಣ್ಣ (42) ಮೃತ ವ್ಯಕ್ತಿ.‌

ಮಾನಸಿಕ‌ ಅಸ್ವಸ್ಥ ಶಿವಣ್ಣನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಯಬುಲೆನ್ಸ್​ನಿಂದ ಜಿಗಿದು ರಸ್ತೆ ಮಧ್ಯೆ ಕುಳಿತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ‌. ಈತನ ವರ್ತನೆ ಕಂಡು ಸಾರ್ವಜನಿಕರು ಗಾಬರಿಯಾಗಿದ್ದು, ಆಂಬುಲೆನ್ಸ್ ಚಾಲಕರು ಮತ್ತು ಪೊಲೀಸರು ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ.

ಗಾಯಗೊಂಡಿದ್ದ ಶಿವಣ್ಣನನ್ನು ಪೊಲೀಸರು ಹಾಗೂ ಸಾರ್ವಜನಿಕರು ಈತನನ್ನು ಹಿಡಿದು ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶಿವಣ್ಣ ಮೃತಪಟ್ಟಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ