Breaking News

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

Spread the love

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ..

ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ.

ಏನಿದು ಪ್ರಕರಣ..?

2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. ಆಗ ಇಬ್ಬರು ಆರೋಪಿಗಳನ್ನ ಚಿಕ್ಕೋಡಿ ಪೊಲೀಸರು ಬಂಧಿಸಿದ್ದರು. ಈ ವೇಳೆ 82 ಸಾವಿರ ಖೋಟಾ ನೋಟುಗಳನ್ನ ಜಪ್ತಿ ಮಾಡಲಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡು ಎನ್‌ಐಎ ತನಿಖೆ ಆರಂಭಿಸಿತ್ತು. ಪ್ರಕರಣದ ಐವರು ಆರೋಪಿಗಳಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ 6 ವರ್ಷ ಸಜೆ ವಿಧಿಸಿತ್ತು. ಸದ್ಯ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಬಂಧನವಾಗಿದ್ದು.. ಬಾಂಗ್ಲಾ ಮೂಲದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ